ಹೊಸಪೇಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಾಗುತ್ತಿದ್ದು, ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆ ಮತ್ತು ಕಾಲೇಜಿನಲ್ಲಿ 32 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ 33 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್ಎಸ್ಎಲ್ ಸಿಯ 9 ವಿದ್ಯಾರ್ಥಿಗಳು, ಪಿಯುಸಿಯ 23 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಒಬ್ಬ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಒಟ್ಟು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ 200 ಕ್ಕೂ ಹೆಚ್ಚು ಜನರ ಪ್ರಾರ್ಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸದ್ಯ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕ ಶುರುವಾಗಿದೆ.