ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ಡಿಸಿಪಿ, ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಮಂದಿ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಒಂದೇ ದಿನ 4991 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟಾರೆ ನಿನ್ನೆ ಒಂದೇ ದಿನ 6,976 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.