Saturday, April 17, 2021
Home ಜಿಲ್ಲೆ ಜಿಲ್ಲಾ ಸುದ್ದಿ ಮೈಸೂರಿಗೆ ಬರಬೇಕಾದರೆ ಕೊರೋನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ

ಇದೀಗ ಬಂದ ಸುದ್ದಿ

ಮೈಸೂರಿಗೆ ಬರಬೇಕಾದರೆ ಕೊರೋನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ

 ಮೈಸೂರು : ಕೊರೊನಾ ಹೆಚ್ಚಳ ಹಿನ್ನೆಲೆ, ಏ.10 ರಿಂದ 20ರವೆರೆಗೆ ಮೈಸೂರಿನ ಪ್ರವಾಸಿ ತಾಣಗಳು,ಟೆಂಪಲ್, ರೆಸಾರ್ಟ್, ಹೊಟೇಲ್, ಚಿತ್ರಮಂದಿರಗಳಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ಗುರುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಏಪ್ರಿಲ್ 10 ರಿಂದ ಸಾಲು, ಸಾಲು ರಜೆಗಳಿದ್ದು, ಯಾವುದೇ ರೀತಿಯಾಗಿ ಪ್ರವಾಸಿ ತಾಣಗಳಿಗೆ ನಿರ್ಬಂಧವಿಲ್ಲ. ಆದರೆ, ಈ ಎಲ್ಲಾ ಕಡೆ ಭೇಟಿ ನೀಡುವವರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ ಎಂದರು.

ನಗರ ಪ್ರದೇಶದಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ಮದುವೆ, ಶುಭ ಕಾರ್ಯಗಳಿಗೆ ಅನುಮತಿ ಕಡ್ಡಾಯ. ಬೆಂಗಳೂರಿನಿಂದ ಬರುವವರಿಗೆ ಆರ್‌ಟಿ‌ಪಿಸಿ‌ಆರ್ ಟೆಸ್ಟ್ ತಂದರೆ ಒಳ್ಳೆಯದು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಜನರು ಜವಾಬ್ದಾರಿಯಿಂದ ವರ್ತಿಸುವುದು ಬಹಳ ಮುಖ್ಯ.  ಸಭೆ, ಸಮಾರಂಭ ನಡೆಸುವುದಕ್ಕೆ ಪೊಲೀಸ್ ಆಯುಕ್ತರ ಒಪ್ಪಿಗೆ ಪಡೆಯಬೇಕು ಎಂದಿದ್ದಾರೆ.

10 ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಪ್ರವಾಸಿ ತಾಣಗಳಲ್ಲಿ ಕೊರೊನಾ ವರದಿ ಪರೀಕ್ಷೆಗಾಗಿ 300 ಮಂದಿ ಹೋಮ್ ಗಾರ್ಡ್ ನೇಮಕ ಮಾಡಲಾಗುವುದು. ನಂಜನಗೂಡು ಸಾಮೂಹಿಕ ಮದುವೆಗಳಿಗೆ ಅವಕಾಶವಿಲ್ಲ. ಸಾವಿರಾರು ಜನರು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. 50 ಜನ ಮೀರಿ ಸೇರುವಂತಿಲ್ಲ ಎಂದು ಮಾಹಿತಿ ನೀಡಿದರು.

TRENDING