Saturday, July 31, 2021
Homeಸುದ್ದಿ ಜಾಲಚುನಾವಣಾ ಪ್ರಚಾರಕ್ಕೆ ನಿಷೇಧ ವಿರೋಧಿಸಿ ಸಿಎಂ ಮಮತಾ ಬ್ಯಾನರ್ಜಿ ಧರಣಿ

ಇದೀಗ ಬಂದ ಸುದ್ದಿ

ಚುನಾವಣಾ ಪ್ರಚಾರಕ್ಕೆ ನಿಷೇಧ ವಿರೋಧಿಸಿ ಸಿಎಂ ಮಮತಾ ಬ್ಯಾನರ್ಜಿ ಧರಣಿ

 ಕೋಲ್ಕತ್ತ, ಏ. 13: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ಹೇರಿರುವ ವಿರುದ್ಧ ಧರಣಿ ನಡೆಸುತ್ತಿದ್ದಾರೆ.

ಕೋಲ್ಕತ್ತಾದ ಹೃದಯ ಭಾಗದಲ್ಲಿ ಮಮತಾ ಬ್ಯಾನರ್ಜಿ ಧರಣಿ ಪ್ರಾರಂಭಿಸಿದ್ದು, ತಮಗೆ ಚುನಾವಣಾ ಪ್ರಚಾರ ಮಾಡುವುದರಿಂದ 24 ಗಂಟೆಗಳ ಕಾಲ ನಿಷೇಧಿಸಿರುವ ಆಯೋಗದ ಕ್ರಮವನ್ನು ಮಮತಾ ಬ್ಯಾನರ್ಜಿ ಅಸಾಂವಿಧಾನಿಕ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ತಮಗೆ ಚುನಾವಣಾ ಆಯೋಗ ಚುನಾವಣಾ ಪ್ರಚಾರದಿಂದ 24 ಗಂಟೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ಧರಣಿ ಪ್ರಾರಂಭಿಸಿದ್ದಾರೆ.

ಚುನಾವಣೆಯಲ್ಲಿ ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದ್ದು ಹಾಗೂ ಕೇಂದ್ರ ಪಡೆಗಳ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿಷೇಧ ವಿಧಿಸಿದೆ.

ವ್ಹೀಲ್ ಚೇರ್ ನಲ್ಲೇ ಮಹಾತ್ಮಾ ಗಾಂಧಿ ಪುತ್ಥಳಿಯ ಬಳಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಮಮತಾ ಬ್ಯಾನರ್ಜಿಗೆ ಬೇರೆ ಯಾವುದೇ ಪಕ್ಷದ ಮುಖಂಡರೂ ಸಾಥ್ ನೀಡಿಲ್ಲ. ಟಿಎಂಸಿ ಅಥವಾ ಇನ್ನಿತರ ಯಾವುದೇ ಪಕ್ಷದ ಮುಖಂಡರೂ ಸಹ ಸ್ಥಳದಲ್ಲಿ ಇಲ್ಲ, ಮಮತಾ ಬ್ಯಾನರ್ಜಿಯೊಬ್ಬರೇ ಸ್ಥಳದಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಟಿಎಂಸಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ಏಪ್ರಿಲ್ 12ರ 8 ಗಂಟೆಯಿಂದ ಏಪ್ರಿಲ್ 13ರ ರಾತ್ರಿ 8 ಗಂಟೆಯವರೆಗೆ ಮಮತಾ ಅವರ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಿ ಆಯೋಗ ಆದೇಶ ಹೊರಡಿಸಿದೆ.

ಮಮತಾ ಬ್ಯಾನರ್ಜಿ ಅವರು ಕೇಂದ್ರದ ಪಡೆಗಳಿಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದೇ ಕೂಚ್ ಬಿಹಾರದಲ್ಲಿ ಜನರು ಸಿಐಎಸ್‌ಎಫ್ ಮೇಲೆ ದಾಳಿಗೆ ಉಂದಾಗಲು ಕಾರಣ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದ್ದರು.

ಮಮತಾ ಬ್ಯಾನರ್ಜಿ ಈ ನೋಟಿಸ್‌ಗೆ ಸೂಕ್ತ ಉತ್ತರ ನೀಡದ ಕಾರಣ, ಅವರ ಚುನಾವಣಾ ಪ್ರಚಾರದ ಮೇಲೆ 24 ಗಂಟೆಗಳ ನಿರ್ಬಂಧ ವಿಧಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img