Saturday, July 31, 2021
Homeಅಂತರ್ ರಾಜ್ಯಕೇರಳ ಉನ್ನತ ಶಿಕ್ಷಣ ಸಚಿವ ಸ್ಥಾನಕ್ಕೆ ಕೆ.ಟಿ.ಜಲೀಲ್ ರಾಜೀನಾಮೆ

ಇದೀಗ ಬಂದ ಸುದ್ದಿ

ಕೇರಳ ಉನ್ನತ ಶಿಕ್ಷಣ ಸಚಿವ ಸ್ಥಾನಕ್ಕೆ ಕೆ.ಟಿ.ಜಲೀಲ್ ರಾಜೀನಾಮೆ

ತಿರುವನಂತಪುರಂ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಉನ್ನತ ಶಿಕ್ಷಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಕೆ.ಟಿ.ಜಲೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವರು ತಮ್ಮ ಸೋದರ ಸಂಬಂಧಿಗೆ ವಿದ್ಯಾರ್ಹತೆ ಬದಲಿಸಿ, ಸರ್ಕಾರಿ ನೌಕರಿ ಕೊಡಿಸುವ ಮೂಲಕ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತಲ್ಲದೇ, ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಸಚಿವರಿಗೆ ಹುದ್ದೆಯಲ್ಲಿ ಮುಂದುವರೆಯುವ ಅರ್ಹತೆ ಇಲ್ಲ ಎಂದು ಲೋಕಾಯುಕ್ತರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕೆ.ಟಿ.ಜಲೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಸ್ವೀಕರಿಸಿರುವ ಸಿಎಂ ಪಿಣರಾಯಿ ವಿಜಯನ್, ರಾಜ್ಯಪಾಲರಿಗೆ ರವಾನಿಸಿದ್ದಾರೆ.

ಕೆ.ಟಿ.ಜಲೀಲ್ ತಮ್ಮ ಸಂಬಂಧಿಕರಾದ ಟಿ.ಕೆ.ಅಬೀದ್ ಎಂಬುವವರಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಪರೇಷನ್ ನಲ್ಲಿ ಕೆಲಸ ನೀಡಿದ್ದರು. ಅಲ್ಲದೇ ಅದಕ್ಕಾಗಿ ಪ್ರಸ್ತುತ ಹುದ್ದೆಗೆ ಬೇಕಾದ ವಿದ್ಯಾರ್ಥತೆಯಲ್ಲಿ ತಿದ್ದುಪಡಿ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img