Monday, May 10, 2021
Homeಕೋವಿಡ್-19ದೇಶದಲ್ಲಿ ಕಳೆದ 24 ಗಂಟೆಯಲ್ಲಿ1,84,372 ಜನರಿಗೆ ಸೋಂಕು ದೃಢ!

ಇದೀಗ ಬಂದ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ1,84,372 ಜನರಿಗೆ ಸೋಂಕು ದೃಢ!

ಹೊಸದಿಲ್ಲಿ: ದೇಶದಲ್ಲಿ 24 ಗಂಟೆ ಅವಧಿಯಲ್ಲಿ 1,84,372 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಕಳೆದ ವರ್ಷ ದೇಶದಲ್ಲಿ ಕೋವಿಡ್ ಸೋಂಕು ಹರಡಲು ಆರಂಭವಾದ ಬಳಿಕ ಒಂದು ದಿನದಲ್ಲಿ ಅತೀ ಹೆಚ್ಚಿನ ಸೋಂಕಿತರ ಸಂಖ್ಯೆ ಇದಾಗಿದೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 1,32,73,825ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯ ಅವಧಿಯಲ್ಲಿ 1027 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 1,72,085ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ಬೆಳಗ್ಗೆ ಆರೋಗ್ಯ ಸಂಸ್ಥೆ ನೀಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ದೇಶದಲ್ಲಿ 13,64,704 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮಂಗಳವಾರ 1,61,736 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದವು.

ಕರ್ನಾಟಕದಲ್ಲಿಯೂ ಮಂಗಳವಾರ 8778 ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ಈಗಾಗಲೇ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಹಾಕಲಾಗಿದ್ದು, ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕು ತಡೆಯಲು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img