Monday, May 10, 2021
Homeಅಂತರ್ ರಾಜ್ಯಕೊರೋನಾ ಹೆಚ್ಚಳ :ಮಹಾರಾಷ್ಟ್ರದಲ್ಲಿ ಇಂದಿನಿಂದ ರಾಜ್ಯಾದ್ಯಂತ 15 ದಿನ ಸೆಕ್ಷನ್ 144 ಜಾರಿ

ಇದೀಗ ಬಂದ ಸುದ್ದಿ

ಕೊರೋನಾ ಹೆಚ್ಚಳ :ಮಹಾರಾಷ್ಟ್ರದಲ್ಲಿ ಇಂದಿನಿಂದ ರಾಜ್ಯಾದ್ಯಂತ 15 ದಿನ ಸೆಕ್ಷನ್ 144 ಜಾರಿ

ಮುಂಬೈ: ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗುತ್ತಿದೆ. ಇದನ್ನು ಲಾಕ್ ಡೌನ್ ಎಂದು ಕರೆಯುವುದಿಲ್ಲ ಎಂದು ರಾಜ್ಯವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಉದ್ದವ್ ಠಾಕ್ರೆ ತಿಳಿಸಿದರು. ಕಠಿಣ ನಿರ್ಬಂಧಗಳನ್ನುಹೇರಲಾಗುವುದು ಎಂದು ಅವರು ಹೇಳಿದ್ದಾರೆ.

ಸ್ಥಳೀಯ ರೈಲು ಸೇವೆ ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸಾರ್ವಜನಿಕ ಸ್ಥಳಗಳು, ಎಲ್ಲಾ ಸಂಸ್ಥೆಗಳು ಮುಂದಿನ15 ದಿನಗಳ ಕಾಲ ಮುಚ್ಚಲಿವೆ. ರಸ್ತೆ ಬದಿ ವ್ಯಾಪಾರಿಗಳು ಮತ್ತು ಆಹಾರ ಮಾರಾಟಗಾರರಿಗೆ ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೂ ಅವಕಾಶ ನೀಡಲಾಗುವುದು, ಅಲ್ಲಿಂದ ಆಹಾರವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಬೇಕು, ಅಲ್ಲಿಯೇ ಕುಳಿತ ಊಟ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img