Tuesday, May 18, 2021
Homeಸುದ್ದಿ ಜಾಲರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ : ಬಿ. ಶ್ರೀರಾಮುಲು

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ : ಬಿ. ಶ್ರೀರಾಮುಲು

 

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಂದ ವ್ಯಾಪಾರಸ್ಥರು, ಮಧ್ಯಮ ವರ್ಗ, ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರು ಸೇರಿದಂತೆ ಅನೇಕರು ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಲಾಕ್ ಡೌನ್ ಮಾಡಿದ್ರೆ ಇನ್ನಷ್ಟು ಸಮಸ್ಯೆ ಉದ್ಧವವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಜನಸಾಮಾನ್ಯರಿಗೆ ತೊಂದರೆ ಕೊಡಬೇಕೆಂಬುದು ಸರ್ಕಾರದ ಉದ್ದೇಶವೂ ಇಲ್ಲ. ಪ್ರತಿಯೊಬ್ಬರೂ ಕಡ್ಡಾಯವಾಗಿ ಚಾಚೂ ತಪ್ಪದೆ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img