Monday, May 10, 2021
Homeಸುದ್ದಿ ಜಾಲಲಾಕ್‌ಡೌನ್‌ ಬೇಡ, ಕೊರೊನಾ ಸಮಸ್ಯೆಗೆ ಅದೇ ಪರಿಹಾರವಲ್ಲ : ಡಿಸಿಎಂ ಅಶ್ವತ್ಥನಾರಾಯಣ

ಇದೀಗ ಬಂದ ಸುದ್ದಿ

ಲಾಕ್‌ಡೌನ್‌ ಬೇಡ, ಕೊರೊನಾ ಸಮಸ್ಯೆಗೆ ಅದೇ ಪರಿಹಾರವಲ್ಲ : ಡಿಸಿಎಂ ಅಶ್ವತ್ಥನಾರಾಯಣ

 

 ಬೆಂಗಳೂರು: ಮತ್ತೆ ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಈಗಿನ ಸಂದರ್ಭದಕ್ಕೆ ಅದು ಸರಿ ಹೊಂದುವುದೂ ಇಲ್ಲ. ಹೊರಗಿನಿಂದ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಬ್ಬರೂ ಕೋವಿಡ್‌ ತಪಾಸಣೆಗೆ ಒಳಗಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ʼಡಾ.ಅಂಬೇಡ್ಕರ್‌ ಜಯಂತಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಗಾರರ ಜತೆ ಅವರು ಮಾತನಾಡಿದರು.

ವೈಯಕ್ತಿಕವಾಗಿ ಲಾಕ್‌ಡೌನ್‌ ಬೇಡ ಎಂತಲೇ ಹೇಳುತ್ತೇನೆ. ಸಮಾಜದಲ್ಲಿ ಯಾರೊಬ್ಬರಿಗೂ ಲಾಕ್‌ಡೌನ್‌ ತಡೆದುಕೊಳ್ಳುವ ಶಕ್ತಿ ಇಲ್ಲ. ಜೀವ ಉಳಿಯುವುದರ ಜತೆಗೆ ಜೀವನವೂ ನಡೆಯಬೇಕು. ಕಳೆದ ಒಂದು ವರ್ಷದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮತ್ತೆ ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂದರು ಡಿಸಿಎಂ.

ಎಲ್ಲ ಕಡೆ ಕೋವಿಡ್‌ ಉಚಿತ ತಪಾಸಣೆ ನಡೆಯುತ್ತಿದೆ. ಒಂದು ನಯಾಪೈಸೆಯನ್ನೂ ಖರ್ಚು ಮಾಡಬೇಕಾಗಿಲ್ಲ. ಹೊರಗಿನಿಂದ ನಗರಕ್ಕೆ ಯಾರಾದರೂ ಬಂದರೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾರೂ ಉಪೇಕ್ಷೆ ಮಾಡಬಾರದು. ಕೋವಿಡ್‌ ಲಕ್ಷಣಗಳೇನಾದರೂ ಕಂಡು ಬಂದರೆ ಅದನ್ನು ಕಡೆಗಣಿಸೋದು ಬೇಡ ಎಂದು ಅವರು ತಿಳಿಸಿದರು.

ಯಾರೂ ಸೂಪರ್ಮ್ಯಾನ್ಅಲ್ಲ : ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದ ಅಶ್ವತ್ಥನಾರಾಯಣ, ‘ನನಗೇನೂ ಆಗಿಲ್ಲ. ನಾನು ಚೆನ್ನಾಗಿದ್ದೇನೆ. ಗಟ್ಟಿಮುಟ್ಟಾಗಿದ್ದೇನೆ ಎಂಬ ಅತಿ ಆತ್ಮವಿಶ್ವಾಸ ಯಾರಿಗೂ ಬೇಡ. ಯಾರೂ ಕೂಡ ಸೂಪರ್‌ಮ್ಯಾನ್‌ ಅಲ್ಲ. ಇದನ್ನು ಎಲ್ಲರೂ ನೆನಪಲ್ಲಿ ಇಟ್ಟುಕೊಳ್ಳಬೇಕು. ಉಚಿತವಾಗಿ ಸಿಗುತ್ತಿರುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು’ ಎಂದು ಡಿಸಿಎಂ ಕಿವಿಮಾತು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img