Tuesday, May 11, 2021
Homeರಾಜ್ಯರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬುಧವಾರ ಸುರಿದ ಭಾರೀ ಮಳೆಯಿಂದಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮೇದಿನಾಪುರ ಗ್ರಾಮದ ಈರಪ್ಪ (32), ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದ ನಾಗಮ್ಮ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುದುರೇಡೆವು ಗ್ರಾಮದ ನಿಂಗರಾಜ ಮತ್ತು ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದ ಬಸವರಾಜು ಎಂಬುವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ರಾಜ್ಯದ ರಾಯಚೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಧಾರವಾಡ, ಹಾವೇರಿ, ದಾವಣಗೆರೆ, ಮೈಸೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಶಿವಮೊಗ್ಗ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಾಮರಾಜನಗರದಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img