Tuesday, May 18, 2021
Homeರಾಜ್ಯಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ : ಸಚಿವ ಕನ್ವರ್...

ಇದೀಗ ಬಂದ ಸುದ್ದಿ

ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ : ಸಚಿವ ಕನ್ವರ್ ಪಾಲ್

ಚಂಡೀಗಢ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹರಿಯಾಣ ಸರ್ಕಾರವು 10ನೇ ತರಗತಿಯ ಪರೀಕ್ಷೆಗಳನ್ನು ಗುರುವಾರ ರದ್ದುಗೊಳಿಸಿದ್ದು, 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿದೆ.

‘ಹರಿಯಾಣದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಾಗಾಗಿ, ಸಿಬಿಎಸ್‌ಸಿಯ ಕೈಗೊಂಡ ನಿರ್ಧಾರವನ್ನು ಹರಿಯಾಣ ಸರ್ಕಾರವೂ ಅನುಸರಿಸಿದೆ’ ಎಂದು ಶಿಕ್ಷಣ ಸಚಿವ ಕನ್ವರ್ ಪಾಲ್ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಹರಿಯಾಣದಲ್ಲಿ ರಾಜ್ಯ ಪ್ರೌಢಶಿಕ್ಷಣ ಮಂಡಳಿಯ ಪರೀಕ್ಷೆಗಳು ಏ‌ಪ್ರಿಲ್‌ನಲ್ಲಿ ಶುರುವಾಗಿ ಮೇ ತಿಂಗಳ ಮಧ್ಯಭಾಗದಲ್ಲಿ ಮುಕ್ತಾಯವಾಗಬೇಕಿತ್ತು.

ಸಿಬಿಎಸ್‌ಸಿಯು ಇದೇ ಮೊದಲ ಬಾರಿಗೆ ಬೋರ್ಡ್ ಪರೀಕ್ಷೆಗಳನ್ನು ಪೂರ್ಣಪ್ರಮಾಣದಲ್ಲಿ ರದ್ದುಗೊಳಿಸಿದೆ. ಈ ಹಿಂದೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಹಾಗೂ ಕೋವಿಡ್ ಪ್ರಕರಣಗಳ ಹೆಚ್ಚಳದ ಸಂದರ್ಭದಲ್ಲಿ ಪರೀಕ್ಷೆಗಳನ್ನು ಭಾಗಶಃ ರದ್ದಗೊಳಿಸಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img