Tuesday, May 18, 2021
Homeಸುದ್ದಿ ಜಾಲ'SSLC ಪರೀಕ್ಷೆ' ಯಥಾ ಪ್ರಕಾರ ನಡೆಸಿ : ಶಿಕ್ಷಣ ಸಚಿವರಿಗೆ ಸಭಾಪತಿ ಬಸವರಾಜ್ ಹೊರಟ್ಟಿ...

ಇದೀಗ ಬಂದ ಸುದ್ದಿ

‘SSLC ಪರೀಕ್ಷೆ’ ಯಥಾ ಪ್ರಕಾರ ನಡೆಸಿ : ಶಿಕ್ಷಣ ಸಚಿವರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪತ್ರ

ಬೆಂಗಳೂರು : ಮಕ್ಕಳ ಸಂರಕ್ಷಿಸುವ ಬಗ್ಗೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡು, ಮಕ್ಕಳ ಹಿತದೃಷ್ಠಿಯಿಂದ, ಅವರ ಉಜ್ವಲ ಭವಿಷ್ಯಕ್ಕಾಗಿ, ಮಕ್ಕಳು ಕಲಿಕೆಯಿಂದ ದೂರ ಸರಿಯದಂತೆ ಮಾಡುವ ನಿಟ್ಟಿನಲ್ಲಿ ಯಥಾ ಪ್ರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ಅನೇಕ ಮಾಧ್ಯಮಗಳಲ್ಲಿ ಸಿಬಿಎಸ್ಸಿ ಹಾಗೂ ಕೇಂದ್ರೀಯ ವಿದ್ಯಾಲಯಗಳ ಪರೀಕ್ಷೆಯನ್ನು ಮುಂದೂಡಿದಂತೆ, ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ತಿಳಿಸಲಾಗಿದೆ. ಅಲ್ಲದೇ ಕೇಂದ್ರ ಸರ್ಕಾರಕ್ಕೆ ಇಲ್ಲದ ಕಾಳಜಿ ರಾಜ್ಯ ಸರ್ಕಾರಕ್ಕೆ ಏಕೆ ಎಂದು ಹೇಳಲಾಗುತ್ತಿದೆ. ಆದ್ರೇ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪರೀಕ್ಷೆ ಮಾಡುವ ಒತ್ತಡ ಏಕೆ.? ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು, ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹಗಳ ಪರ-ವಿರೋಧಗಳು ನಡೆದಿವೆ. ಇದರ ಬಗ್ಗೆ ಜಿಜ್ಞಾಸೆ ಉಂಟಾಗಿದೆ. ಅಲ್ಲದೇ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಇನ್ನೂ 2 ತಿಂಗಳು ಸಮಯ ಇರುವುದರಿಂದ ಮತ್ತು ಈಗಾಗಲೇ ಕೆಲವು ಪಾಲಕರು ಪರೀಕ್ಷೆ ಮುಂದೂಡಬಾರದೆಂದು ಸಹ ಮಾಧ್ಯಮಗಳಲ್ಲಿ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿರುತ್ತಾರೆ.

ಈ ಹಿನ್ನಲೆಯಲ್ಲಿ ನಾನು ತಮಗೆ ತಿಳಿಸುವುದೇನೆಂದರೇ, ಪರೀಕ್ಷೆಗಳನ್ನು ಮುಂದೂಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಕಾಲ-ಕಾಲಕ್ಕೆ ನಿಗದಿಯಾದ ಪರೀಕ್ಷೆಗಳನ್ನು ಮಾಡುವುದರಿಂದ ಮಕ್ಕಳ ಕಲಿಕೆಯ ಬಗ್ಗೆ ಹಾಗೂ ಶಾಲೆಯ ಬಗ್ಗೆ ಒಳ್ಳೆಯ ಬಾಂಧವ್ಯ ಬೆಳೆಯುತ್ತದೆ.

ಕೊರೋನಾ ನಂತಹ ರೋಗ ಎಲ್ಲಾ ಹಂತದಲ್ಲಿದ್ದಾಗ ರಾಜ್ಯದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಮಕ್ಕಳಿಗೆ ಪರೀಕ್ಷೆ ಮಾನಸಿಕವಾಗಿ ಒಂದು ನೆಮ್ಮದಿಯನ್ನು ಕಲ್ಪಿಸುವಂತದ್ದು. ಈ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಿದರೇ ಮಕ್ಕಳು ಕಲಿಕೆಯಿಂದ ದೂರ ಸರಿಯುತ್ತಾರೆ. ಕಲಿಕೆಯ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳುವಂತಾಗುತ್ತದೆ. ನಮ್ಮ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರೀಕೃತವಾಗಿರುತ್ತದೆ. ಪರೀಕ್ಷೆಗಳನ್ನು ಕೋವಿಡ್-19ನ ಎಲ್ಲಾ ನಿಯಮಾವಳಿಗಳನ್ನು ಪಾಲಿಸಿ ನಡೆಸುವಂತಾಗಬೇಕು.

ಸರ್ಕಾರ ಈ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಿಸುವ ಬಗ್ಗೆ ಕಟ್ಟು ನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಖಾಸಗಿ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಗೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸುವ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತಾವು ಒಂದು ಗಟ್ಟಿ ನಿರ್ಧಾರ ತೆಗೆದುಕೊಂಡು, ನಿಯಮಗಳ ಪ್ರಕಾರ ಪರೀಕ್ಷೆ ನಡೆಸಬೇಕು. ಯಾವುದೇ ಕ್ರಮವಹಿಸಿದರೂ ಸಹ ಜನರ ಪರ ವಿರೋಧ ಅಭಿಪ್ರಯಾಗಳು ಇದ್ದೇ ಇರುತ್ತವೆ.

ಮಕ್ಕಳ ಹಿತದೃಷ್ಠಿ, ಉಜ್ವಲ ಭವಿಷ್ಯದ ದೃಷ್ಠಿಯಿಂದ ಚಿಂತನೆ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಹೊಣೆ ಹಾಗೂ ಜವಾಬ್ದಾರಿಯು ಆಗಿರುತ್ತದೆ. ಹೀಗಾಗಿ ತಾವು ಯಾವುದೇ ರೀತಿಯಿಂದ ಯೋಚಿಸದೇ ನಿಯಮಾನುಸಾರ ಯಥಾ ಪ್ರಕಾರ ಪರೀಕ್ಷೆ ನಡೆಸಬೇಕೆಂದು ಪತ್ರದಲ್ಲಿ ಕೋರಿಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img