Monday, May 10, 2021
Homeರಾಜ್ಯರಾಜ್ಯದಲ್ಲಿ ಕೊರೊನಾ ಅಬ್ಬರ : ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಕೊರೊನಾ ಅಬ್ಬರ : ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತುರ್ತು ಸಭೆ ಕರೆದಿದ್ದಾರೆ.

ಇಂದು ಬೆಳಗ್ಗೆ 9.30 ಕ್ಕೆ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ನಡೆಸಲಿದ್ದು, ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರು ಭಾಗಿಯಾಗಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲಿದ್ದಾರೆ ಎನ್ನಲಾಗಿದೆ.

ಇಂದು ನಡೆಯುವ ಸಭೆಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಜಿಲ್ಲೆಗಳಲ್ಲಿ ಕಠಿಣ ನಿಯಮಗಳ ಜಾರಿ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img