Tuesday, May 11, 2021
Homeಸುದ್ದಿ ಜಾಲಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯದಲ್ಲಿ ಮತ್ತೆ ಏರುಪೇರು : ಆಸ್ಪತ್ರೆಗೆ ದಾಖಲು

ಇದೀಗ ಬಂದ ಸುದ್ದಿ

ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯದಲ್ಲಿ ಮತ್ತೆ ಏರುಪೇರು : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಇಂದು ಮತ್ತೆ ಏರುಪೇರಾಗಿದ್ದು, ಎಂ.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿಎಸ್ ವೈ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಅವರು ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ ಹೋಟೆಲ್ ಗೆ ತೆರಳಿ ವಿಶ್ರಾಂತಿ ಪಡೆದಿದ್ದರು.

ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ತುರ್ತು ಸಭೆ ನಡೆಸಿದ್ದರು. ನಂತರ ಆಸ್ಪತ್ರೆಗೆ ತೆರಳಿದ್ದು, ಸಂಜೆಯವರೆಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

ಕೋವಿಡ್ ನೆಗೆಟಿವ್: ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img