Monday, May 10, 2021
Homeಕೋವಿಡ್-19ವಿಶ್ವದಲ್ಲಿ ಒಂದೇ ದಿನದಲ್ಲಿ 8,36,294 ಜನರಿಗೆ ಕೊರೋನಾ, 13839 ಜನ ಸಾವು

ಇದೀಗ ಬಂದ ಸುದ್ದಿ

ವಿಶ್ವದಲ್ಲಿ ಒಂದೇ ದಿನದಲ್ಲಿ 8,36,294 ಜನರಿಗೆ ಕೊರೋನಾ, 13839 ಜನ ಸಾವು

ನವದೆಹಲಿ : ವಿಶ್ವಾದ್ಯಂತ ಕೊರೋನಾ ವೈರಸ್ ಎರಡನೇ ಅಬ್ಬರಿಸುತ್ತಿದ್ದೆ. ಈ ನಡುವೆ ವಿಶ್ವದಲ್ಲಿ ಒಂದೇ ದಿನದಲ್ಲಿ 8,36,294 ಮಂದಿಗೆ ಕೊರೊನಾವೈರಸ್ ಸೋಂಕು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,96,65,916ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 13839 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 29,98,843ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 11,87,52,504 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 1,79,14,569 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಹೊಸ ಪ್ರಕರಣಗಳ ಏರಿಕೆ ಮಧ್ಯೆ ಮಹಾಮಾರಿಗೆ ಬ್ರೆಜಿಲ್ ನಲ್ಲಿ ಅತಿಹೆಚ್ಚು ಸಾವಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣಗಳು ಇದೊಂದೇ ರಾಷ್ಟ್ರದಲ್ಲಿ ವರದಿಯಾಗಿವೆ.

ಒಂದೇ ದಿನದಲ್ಲಿ ಕೊವಿಡ್-19 ಸೋಂಕಿನಿಂದ 3774 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 3,65,954ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 80529 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,37,58,093ಕ್ಕೆ ಏರಿಕೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img