Tuesday, May 18, 2021
Homeಕೋವಿಡ್-19ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಶೇ 80ರಷ್ಟು ಹೊಸ ಕೊರೊನಾ ಪ್ರಕರಣ

ಇದೀಗ ಬಂದ ಸುದ್ದಿ

ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಶೇ 80ರಷ್ಟು ಹೊಸ ಕೊರೊನಾ ಪ್ರಕರಣ

ನವದೆಹಲಿ: ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ಪ್ರತಿ ನಿತ್ಯ ಶೇ 79.10ರಷ್ಟು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಛತ್ತೀಸ್‌ಗಡ, ಕರ್ನಾಟಕ, ಮಧ್ಯಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಪ್ರತಿ ನಿತ್ಯ ಕೊರೊನಾ ಸೋಂಕಿನ ಪ್ರಕರಣಗಳು ವೇಗವಾಗಿ ಏರಿಕೆಯಾಗುತ್ತಿದ್ದು, ಇವುಗಳಲ್ಲಿ ಮುಕ್ಕಾಲು ಪಾಲು ಹೊಸ ಕೋವಿಡ್‌ ಪ್ರಕರಣಗಳಾಗಿವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ ಹೊಸ ಪ್ರಕರಣಗಳ ಸಂಖ್ಯೆ 2,17,353.

ಹತ್ತು ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿವೆ. ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶ ಮತ್ತು ದೆಹಲಿ ಇದೆ. 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ದಾಖಲಾದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 61,695. ಉತ್ತರ ಪ್ರದೇಶದಲ್ಲಿ 22,339 ಮತ್ತು ದೆಹಲಿಯಲ್ಲಿ 16,699.

ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 15,69,743ಕ್ಕೆ ಏರಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಶೇ 10.98ರಷ್ಟಿದೆ. 24 ಗಂಟೆಗಳಲ್ಲಿ ದಾಖಲಾಗಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 97,866.

ದೇಶದಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಪ್ರಮಾಣದಲ್ಲಿ ಶೇ 65.86ರಷ್ಟು ಮಹಾರಾಷ್ಟ್ರ, ಛತ್ತೀಸ‌ಗಡ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಕೇರಳದಲ್ಲಿ ದಾಖಲಾಗಿವೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಶೇ 39.60ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img