Monday, May 10, 2021
Homeಕೋವಿಡ್-19ದೇಶದಲ್ಲಿ 90 ದಿನಗಳಲ್ಲಿ 11.70 ಕೋಟಿ ಜನರಿಗೆ ಕೊರೊನಾ ಲಸಿಕೆ!

ಇದೀಗ ಬಂದ ಸುದ್ದಿ

ದೇಶದಲ್ಲಿ 90 ದಿನಗಳಲ್ಲಿ 11.70 ಕೋಟಿ ಜನರಿಗೆ ಕೊರೊನಾ ಲಸಿಕೆ!

ನವದೆಹಲಿ, ಏ.16: ಕೊರೊನಾವೈರಸ್ ಸಾಂಕ್ರಿಮಿಕ ರೋಗದ ಹರಡುವಿಕೆ ವೇಗ ದಿನೇ ದಿನೆ ಹೆಚ್ಚುತ್ತಿದೆ. ಕೊವಿಡ್-19 ಸೋಂಕು ಅಂಟಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲು ಲಸಿಕೆ ವಿತರಣೆ ಕಾರ್ಯವನ್ನು ನಡೆಸಲಾಗುತ್ತಿದೆ.

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 90 ದಿನ ಕಳೆದಿದೆ. ಈವರೆಗೂ 11.70 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಗುರುವಾರ ಒಂದೇ ದಿನ 26,02,375 ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 20,59,873 ಫಲಾನುಭವಿಗಳಿಗೆ ಮೊದಲ ಡೋಸ್, 5,42,502 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 11,70,96,037 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಯಾವ ಫಲಾನುಭವಿಗಳಿಗೆ ಎಷ್ಟು ಲಸಿಕೆ ನೀಡಲಾಗಿದೆ.

ಮೊದಲ ಹಂತದಲ್ಲಿ ಲಸಿಕೆ ವಿತರಣೆ ಅಭಿಯಾನ:

ದೇಶದಲ್ಲಿ 90,82,153 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 56,33,982 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,02,90,850 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 51,51,557 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 3,86,76,098 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 9,84,785 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ4,41,90,147 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 30,86,465 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img