Monday, May 10, 2021
Homeಸುದ್ದಿ ಜಾಲಕುಂಭಮೇಳದಿಂದ ರಾಜ್ಯಕ್ಕೆ ಬರೋರಿಗೆ RT-PCR ಪರೀಕ್ಷೆ ಕಡ್ಡಾಯ: ಸಚಿವ ಡಾ. ಕೆ ಸುಧಾಕರ್

ಇದೀಗ ಬಂದ ಸುದ್ದಿ

ಕುಂಭಮೇಳದಿಂದ ರಾಜ್ಯಕ್ಕೆ ಬರೋರಿಗೆ RT-PCR ಪರೀಕ್ಷೆ ಕಡ್ಡಾಯ: ಸಚಿವ ಡಾ. ಕೆ ಸುಧಾಕರ್

ನವದೆಹಲಿ: ರಾಜ್ಯದಲ್ಲಿ ಕೊರೊನಾ ಸೋಂಕಿನ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ಕೊರೊನಾಗೆ ಕಡಿವಾಣ ಹಾಕಲು ಸರ್ಕಾರ ನೈಟ್‌ ಕರ್ಫ್ಯೂ ಸೇರಿ ಕಟ್ಟುನಿಟ್ಟಿನ ಕ್ರಮಗಳ ಕೈಗೊಂಡಿದೆ. ಅದ್ರಂತೆ, ಹರಿದ್ವಾರದಿಂದ ಕರ್ನಾಟಕಕ್ಕೆ ವಾಪಸ್ ಆಗುವ ಯಾತ್ರಿಕರಿಗೆ RT-PCR ಪರೀಕ್ಷೆ ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ‘ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗಟೀವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಅಂದ್ಹಾಗೆ, ಹರಿದ್ವಾರದ ಕುಂಭಮೇಳದಲ್ಲಿ ಭಾಗವಹಿಸಿದ 525 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಹರಿದ್ವಾರದಲ್ಲಿ ಕಳೆದ ಐದು ದಿನಗಳಲ್ಲಿ 2167 ಜನರಲ್ಲಿ ಸೋಂಕು ಪತ್ತೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img