Monday, May 10, 2021
Homeಸುದ್ದಿ ಜಾಲಇನ್ನಷ್ಟು ನಗರಗಳಿಗೆ ರಾತ್ರಿ ಕರ್ಫ್ಯೂ ವಿಸ್ತರಣೆ: ಸಚಿವ ಬೊಮ್ಮಾಯಿ

ಇದೀಗ ಬಂದ ಸುದ್ದಿ

ಇನ್ನಷ್ಟು ನಗರಗಳಿಗೆ ರಾತ್ರಿ ಕರ್ಫ್ಯೂ ವಿಸ್ತರಣೆ: ಸಚಿವ ಬೊಮ್ಮಾಯಿ

ಕಲಬುರ್ಗಿ: ‘ಕೊರೊನಾ ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಅನ್ನು ಇನ್ನಷ್ಟು ನಗರಗಳಿಗೆ ವಿಸ್ತರಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಸದ್ಯ ಬೆಂಗಳೂರು, ಮೈಸೂರು, ಕಲಬುರ್ಗಿ, ಬೆಳಗಾವಿ ಸೇರಿದಂತೆ ಕೆಲ ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ನಗರಗಳಲ್ಲಿಯೂ ಇದನ್ನು ಜಾರಿಗೊಳಿಸಲಾಗುವುದು’ ಎಂದು ಗುರುವಾರ ಇಲ್ಲಿ ಮಾಧ್ಯಮದವರಿಗೆ ತಿಳಿಸಿದರು.

‘ರಾಜ್ಯದಾದ್ಯಂತ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕು. ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img