Tuesday, May 18, 2021
Homeಸುದ್ದಿ ಜಾಲSSLC-PUC ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರಿಂದ ಸ್ಪಷ್ಟನೆ

ಇದೀಗ ಬಂದ ಸುದ್ದಿ

SSLC-PUC ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರಿಂದ ಸ್ಪಷ್ಟನೆ

ಚಾಮರಾಜನಗರ: ಸಿ ಬಿ ಎಸ್ ಸಿ 10ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳು ರದ್ದಾಗಲಿವೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿವೆ ಈ ಬಗ್ಗೆ ಇಂದು ಸ್ವತ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯು ಪರೀಕ್ಷೆಗಳು ನಡೆಯಲಿವೆ. ಈ ಬಗ್ಗೆ ಗೊಂದಲ ಬೇಡ. ಎಸ್.ಎಸ್.ಎಲ್.ಸಿ. ಪರೀಕ್ಷೆ ನಿಗದಿಯಾಗಿರುವುದು ಜೂನ್ 21ರಿಂದ ಕಳೆದ ವರ್ಷ ನಿಡಲಾಗಿದ್ದ ಎಸ್‌ಒಪಿಯನ್ನೇ ಅಳವಡಿಕಾ ಕ್ರಮವಾಗಿ ಅನುಸರಿಸಲಾಗುವುದು ಎಂದರು.

ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಬೇಕು ಎಂಬುದು ಹಲವರ ಒತ್ತಾಯ. ಈ ಬಗ್ಗೆ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಪತ್ರ ಬರೆದಿದ್ದಾರೆ. ಪರೀಕ್ಷಾ ದಿನಾಂಕಕ್ಕೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಹಾಗಾಗಿ ಆಗಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು 1-9ನೇ ತರಗತಿ ಪರೀಕ್ಷೆಗಳ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಗುತ್ತದೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img