Tuesday, May 18, 2021
Homeಕೋವಿಡ್-19ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್..!

ಇದೀಗ ಬಂದ ಸುದ್ದಿ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್..!

ಬೆಂಗಳೂರು,ಏ.17- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ನಗರಕ್ಕೆ ಮರಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ಪಾಸಿಟಿವ್ ವರದಿ ಬಂದಿರುವುದನ್ನು ಸ್ವತಃ ಕುಮಾರಸ್ವಾಮಿ ಅವರೇ ಟ್ವೀಟ್ ಮೂಲಕ ತಿಳಿಸಿದ್ದು, ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.

ಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯವಾದ ಬಳಿಕ ಬೀದರ್‍ನಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img