Tuesday, May 11, 2021
Homeಕೋವಿಡ್-19BREAKING : ನಟ ನಿಖಿಲ್ ಕುಮಾರಸ್ವಾಮಿಗೂ 'ಕೊರೋನಾ ಪಾಸಿಟಿವ್'

ಇದೀಗ ಬಂದ ಸುದ್ದಿ

BREAKING : ನಟ ನಿಖಿಲ್ ಕುಮಾರಸ್ವಾಮಿಗೂ ‘ಕೊರೋನಾ ಪಾಸಿಟಿವ್’

ಬೆಂಗಳೂರು : ಇಂದು ಬೆಳಿಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಕಾರಣ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದಂತ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇಂತಹ ಅವರಿಗೂ ಪ್ರಾಥಮಿಕ ವರದಿಯಿಂದ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂಬುದಾಗಿ ಮನವಿ ಮಾಡಿದ್ದಾರೆ.

ಅಂದಹಾಗೇ, ಕೊರೋನಾ ಸೋಂಕಿತ ಜನಸಾಮಾನ್ಯರಿಗೆ ಬೆಡ್ ಸಿಗ್ತಾ ಇಲ್ಲ ಎಂಬ ಕೂಗು ರಾಜ್ಯದಲ್ಲಿ ಕೇಳಿ ಬರ್ತಾ ಇದೆ. ಇದೇ ಸಂದರ್ಭದಲ್ಲಿ ಇಂದು ಕೊರೋನಾ ಸೋಂಕಿಗೆ ಒಳಗಾದಂತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗೋದಕ್ಕೆ ಬೆಡ್ ಸಿಕ್ಕಿಲ್ಲ. ಹೀಗಾಗಿ ಬನ್ನೇರುಘಟ್ಟ ರಸ್ತೆಯಲ್ಲಿರುವಂತ ಅಪಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಇಂದು ಬೆಳಿಗ್ಗೆ ಬೆಡ್ ಸಿಕ್ಕಿಲ್ಲ. ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು.? ಎಂಬ ಮಾತು ಕೇಳಿ ಬಂದಿತ್ತು.

ಅಂದ ಹಾಗೆ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿದೆ.
ಹೀಗಾಗಿಯೇ ಬೆಂಗಳೂರಿಗೆ ಮರಳಿದವರು ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಧೃಢಪಟ್ಟಿದೆ.

ಹೀಗಾಗಿ ವೈದ್ಯರ ಬಳಿ ಮಾತುಕತೆ ನಡೆಸಿ, ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರಾದರೂ ವೈದ್ಯರು ಅದನ್ನೊಪ್ಪಿಲ್ಲ. ಈ ವಿಷಯದಲ್ಲಿ ರಿಸ್ಕ್ ಬೇಡ. ತಕ್ಷಣವೇ ಆಸ್ಪತ್ರೆಗೆ ಅಡ್ಮಿಟ್ ಆಗಿ ಎಂದವರು ಹೇಳಿದ್ದರು. ಹೀಗಾಗಿ ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿತ್ತು.

ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಬೆಡ್ ಸಿಕ್ಕಿದೆ. ಇದರಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆಗಾಗಿ ಬೆಡ್ ಸಿಗದೇ ಇದ್ದ ಕಾರಣ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಇದೀಗ ಬನ್ನೇರುಘಟ್ಟ ರಸ್ತೆಯ ಅಪಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img