Tuesday, May 18, 2021
Homeಕೋವಿಡ್-19'ಗನ್ ಮ್ಯಾನ್'ಗೆ ಕೊರೋನಾ ಪಾಸಿಟಿವ್ ಹಿನ್ನಲೆ : ಡಿಸಿಎಂ ಸವದಿ ಹೋಂ ಕ್ವಾರಂಟೈನ್

ಇದೀಗ ಬಂದ ಸುದ್ದಿ

‘ಗನ್ ಮ್ಯಾನ್’ಗೆ ಕೊರೋನಾ ಪಾಸಿಟಿವ್ ಹಿನ್ನಲೆ : ಡಿಸಿಎಂ ಸವದಿ ಹೋಂ ಕ್ವಾರಂಟೈನ್

ಬೆಂಗಳೂರು : ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್‍ಮ್ಯಾನ್‍ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ನಲ್ಲಿ ಇರುವುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಉಪ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ ಬಳಿಕ, ನನ್ನೊಂದಿಗೆ ಭಾಗವಹಿಸಿದ್ದಂತ ಕೆಲವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ನನ್ನ ಗನ್ ಮ್ಯಾನ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img