Tuesday, May 18, 2021
Homeರಾಜ್ಯರಾಜ್ಯದಲ್ಲಿ `SSLC- PUC ' ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ `SSLC- PUC ‘ ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಚಾಮರಾಜನಗರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ರಾಜ್ಯದಲ್ಲಿ ಪರೀಕ್ಷೆಗೆ ಇನ್ನೂ 2 ತಿಂಗಳು ಇದೆ. ಹೀಗಾಗಿ ಪರೀಕ್ಷೆ ರದ್ದು ಬಗ್ಗೆ ತೀರ್ಮಾನ ಮಾಡುವುದು ಈಗ ಬೇಡ. ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ರಾಜ್ಯದಲ್ಲೂ ಎಸ್‌ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img