Monday, May 10, 2021
Homeರಾಜ್ಯಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್ : 2,433 ಸಾರಿಗೆ ನೌಕರರ ಅಮಾನತು

ಇದೀಗ ಬಂದ ಸುದ್ದಿ

ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್ : 2,433 ಸಾರಿಗೆ ನೌಕರರ ಅಮಾನತು

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಿರತ ಬಿಎಂಟಿಸಿ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಶನಿವಾರವೊಂದೇ ದಿನ 2,443 ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ, ಗಾಂಧಿನಗರ, ಬೆಂಗಳೂರು ರವರು ನಡೆಸುತ್ತಿರುವ ಕಾನೂನು ಬಾಹಿರ ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಹಾಗೂ ಕರ್ತವ್ಯಕ್ಕೆ ಹಾಜರಾಗದಂತೆ ಸಹ ನೌಕರರನ್ನು ಸಹ ಪ್ರಚೋದಿಸಿರುತ್ತಾರೆ, ಆದ್ದರಿಂದ ಸದರಿ ಸಿಬ್ಬಂದಿ ಸಂಸ್ಥೆಯ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹಾಗೂ ಸಂಸ್ಥೆಯು ಅಳವಡಿಸಿಕೊಂಡಿರುವ ಕ.ರಾ.ರ.ಸಂಸ್ಥೆಯ ನೌಕರರ ( ನಡತೆ ಮತ್ತು ಶಿಸ್ತು) ನಿಯಮಾವಳಿ 1971 ರ ನಿಯಮ -23 ರ ಅಡಿಯಲ್ಲಿ ಆರೋಪಣಾ ಪತ್ರವನ್ನು ಜಾರಿಗೊಳಿಸಲಾಗಿದೆ ಎಂದು ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಾರಿಗೆ ನೌಕರರು ಆರನೆ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಷ್ಕರ ನಿರತ ನೌಕರರಿಗೆ ಅಮಾನತು ಮಾಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img