Monday, May 10, 2021
Homeಬೆಂಗಳೂರುಕೊರೊನಾ ಹಿನ್ನೆಲೆ: 'ವಿಧಾನಸೌಧ,ವಿಕಾಸಸೌಧ'ಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ..!

ಇದೀಗ ಬಂದ ಸುದ್ದಿ

ಕೊರೊನಾ ಹಿನ್ನೆಲೆ: ‘ವಿಧಾನಸೌಧ,ವಿಕಾಸಸೌಧ’ಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಭವಾಗ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸಾರ್ವಜನಿಕ ಪ್ರವೇಶವನ್ನ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಈ ಕುರಿತು ಸುತ್ತೋಲೆ ಗೊರಡಿಸಿರುವ ಸರ್ಕಾರ, ʼವಿಧಾನಸೌಧದಲ್ಲಿನ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವ ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಿದ ಭೇಟಿ ಹೊರತುಪಡಿಸಿ ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದೆʼ ಎಂದಿದೆ.

ಸಚಿವಾಲಯದ ಸಿಬ್ಬಂದಿ, ಅಧಿಕಾರಿ ಮತ್ತು ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಭೇಟಿಗೆ ಪೂರ್ವಾನುಮತಿ ಪತ್ರವನ್ನ ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಇನ್ನು ಮಧ್ಯಾಹ್ನ 3.30ರ ಬಳಿಕವೇ ಈ ಭೇಟಿಗೆ ಅವಕಾಶ ನೀಡಬೇಕು ಎಂದು ಸರ್ಕಾರ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img