Tuesday, May 18, 2021
Homeಸುದ್ದಿ ಜಾಲಲಾಕ್ ಡೌನ್ ಇಲ್ಲ, ಆದರೆ ಟಫ್ ರೂಲ್ಸ್ ಜಾರಿ:ಸಚಿವ ಆರ್. ಅಶೋಕ್

ಇದೀಗ ಬಂದ ಸುದ್ದಿ

ಲಾಕ್ ಡೌನ್ ಇಲ್ಲ, ಆದರೆ ಟಫ್ ರೂಲ್ಸ್ ಜಾರಿ:ಸಚಿವ ಆರ್. ಅಶೋಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು. ಆದರೆ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವ ಪ್ರಶ್ನೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸಚಿವರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಮಾಡಲ್ಲ. ಆದರೆ ಟಫ್ ರೂಲ್ಸ್ ಜಾರಿಗೆ ತರಬೇಕಾದ ಅನಿವಾರ್ಯತೆ ಇದೆ. ಬಡವರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ನಾಳೆ ಸರ್ವಪಕ್ಷ ಸಭೆ ನಡೆಯಲಿದ್ದು, ಅದಕ್ಕೆ ಪೂರಕವಾಗಿ ಇಂದು ಸಚಿವರ ಸಭೆ ನಡೆಯಿತು. ಬೆಂಗಳೂರಿನಲ್ಲಿ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚೆ ನಡೆದಿದೆ. ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಯಾವೆಲ್ಲ ರೀತಿ ನಿಯಮ ಜಾರಿಗೆ ತಂದು ಕೊರೊನಾ ನಿಯಂತ್ರಣ ಮಾಡಬಹುದು ಎಂಬ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಸಿಎಂ ಗೆ ತಿಳಿಸುತ್ತೇವೆ. ನಾಳೆ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img