Monday, May 10, 2021
Homeಸುದ್ದಿ ಜಾಲಪೆರು ನಲ್ಲಿ ಸೇನಾ ಹೆಲಿಕಾಪ್ಟರ್ ಪತನ : ಐವರು ಸಾವು

ಇದೀಗ ಬಂದ ಸುದ್ದಿ

ಪೆರು ನಲ್ಲಿ ಸೇನಾ ಹೆಲಿಕಾಪ್ಟರ್ ಪತನ : ಐವರು ಸಾವು

ಲಿಮಾ: ಪೆರು ದೇಶದ ಕುಸ್ಕೊ ಪ್ರಾಂತ್ಯದಲ್ಲಿ ಸೇನೆಯ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಐವರು ಪೆರು ಸೇನೆಯ ಸೈನಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸಶಸ್ತ್ರ ಪಡೆಗಳ ಜಂಟಿ ಕಮಾಂಡ್ ತಿಳಿಸಿದೆ.

ಶನಿವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಒಟ್ಟು 12 ಸೈನಿಕರನ್ನು ಹೊತ್ತ ಹೆಲಿಕಾಪ್ಟರ್ ಅಕ್ರಮ ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಜಾಗೃತ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

‘ಸಶಸ್ತ್ರ ಪಡೆಗಳ ಸಿಬ್ಬಂದಿ ಸಾವಿಗೆ ವಿಷಾಧ ವ್ಯಕ್ತಪಡಿಸಿದ ಸೇನೆ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸ್ದಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img