Tuesday, May 11, 2021
Homeಬೆಂಗಳೂರುಅಕ್ರಮವಾಗಿ 'ರೆಮ್‍ಡಿಸಿವಿರ್' ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಇದೀಗ ಬಂದ ಸುದ್ದಿ

ಅಕ್ರಮವಾಗಿ ‘ರೆಮ್‍ಡಿಸಿವಿರ್’ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು,ಏ.18- ಕೊರೊನಾ ಸೋಂಕಿನ ಚಿಕಿತ್ಸೆಗೆ ಬಳಕೆ ಮಾಡಲಾಗುವ ರೆಮ್‍ಡಿಸಿವಿರ್ ಔಷಧಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಸಿದ್ದಾರೆ.

ರೆಮ್‍ಡಿಸಿವಿರ್ ಔಷಯನ್ನು ಅಕ್ರಮವಾಗಿ ಅಡಗಿಸಿಟ್ಟು ಕೃತಕ ಅಭಾವ ಸೃಷ್ಟಿಸುತ್ತಿರುವ ಆರೋಪಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಸಿಸಿಬಿ ಪೊಲೀಸರು ತಪಾಸಣಾ ಕಾರ್ಯವನ್ನು ಕೈಗೊಂಡಿದ್ದಾರೆ.

ತಪಾಸಣೆ ವೇಳೆ ಸುದ್ದಗುಂಟೆ ಪಾಳ್ಯದ ಗುರುಶ್ರೀ ಮೆಡಿಕಲ್ಸ್‍ನ ರಾಜೇಶ್ ಮತ್ತು ಶಕೀಬ್, ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಹಿಲ್ ಅವರುಗಳನ್ನು ಬಂಸಲಾಗಿದೆ. ಈ ಆರೋಪಿಗಳು ರೆಮ್‍ಡಿಸಿವಿರ್ ಔಷಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಎಂಆರ್‍ಪಿ ದರವನ್ನು ಮೀರಿ ಪ್ರತಿ ಬಾಟಲ್‍ಗೆ 10,500 ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ವೇಳೆ 11 ಇಂಜೆಕ್ಷನ್ ಬಾಟಲ್‍ಗಳನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಆರೋಪಿಗಳು ಈ ಇಂಜೆಕ್ಷನ್ ಬಾಟಲ್‍ಗಳನ್ನು ಎಲ್ಲಿಂದ ತರಿಸಿದ್ದರು ಎಂಬುದನ್ನು ಪತ್ತೆಹಚ್ಚಲು ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

# ದೇಶಾದ್ಯಂತ ತಪಾಸಣೆ:
ಕೊರೊನಾ ಸೋಂಕು ನಿಯಂತ್ರಣಕ್ಕೆ ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳನ್ನು ಬಳಕೆ ಮಾಡಲಾಗುತ್ತಿದೆ. ಹೊಸದಾಗಿ ಸ್ಪುಟ್ನಿಕ್‍ವಿ ಲಸಿಕೆಯನ್ನು ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಸೋಂಕು ತಗುಲಿದ ಬಳಿಕ ಚಿಕಿತ್ಸೆ ನೀಡಲು ರೆಮ್‍ಡಿಸಿವಿರ್ ಇಂಜೆಕ್ಷನ್ ಬಳಕೆ ಮಾಡಲಾಗುತ್ತಿದೆ. ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ರೋಗಿಗಳ ಪ್ರಮಾಣ ಕೂಡ ತೀವ್ರವಾಗಿದೆ.

ಈ ಹಂತದಲ್ಲಿ ದೇಶಾದ್ಯಂತ ರೆಮ್‍ಡಿಸಿವಿರ್‍ನ ಕೊರತೆ ವ್ಯಾಪಕವಾಗಿದೆ. ಈ ಇಂಜೆಕ್ಷನ್‍ನ್ನು ಅಕ್ರಮವಾಗಿ ದಾಸ್ತಾನು ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಆರೋಪಗಳು ಕೇಳಿಬರುತ್ತಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು, ಮುಂಬೈ, ಕೋಲ್ಕತ್ತಾ ಸೇರಿದಂತೆ ದೇಶಾದ್ಯಂತ ತಪಾಸಣಾ ಕಾರ್ಯ ನಡೆಯುತ್ತಿದ್ದು, ಕಾಳಸಂತೆಯಲ್ಲಿ ಔಷಯನ್ನು ಅಕ್ರಮವಾಗಿ ದಾಸ್ತಾನು ಮಾಡಿದವರ ಪತ್ತೆಹಚ್ಚುವ ಕೆಲಸ ಮಾಡಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img