Tuesday, May 11, 2021
Homeಅಂತರ್ ರಾಜ್ಯಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ : ಮೂವರು ಕಾರ್ಮಿಕರ ಸಾವು

ಇದೀಗ ಬಂದ ಸುದ್ದಿ

ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ : ಮೂವರು ಕಾರ್ಮಿಕರ ಸಾವು

ಮುಂಬೈ : ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ನಡೆದು ಮೂರು ಜನ ಕಾರ್ಮಿಕರು ಸಾವನ್ನಪ್ಪಿ, 8 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಭಾನುವಾರ (ಏಪ್ರಿಲ್ 18) ಮುಂಜಾನೆ ನಡೆದಿದೆ.

ರತ್ನಗಿರಿ ಜಿಲ್ಲೆಯ ಖೇದ್ ತಾಲೂಕಿನಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಇಂದು ಮುಂಜಾನೆ 9.30ರ ಸುಮಾರಿಗೆ ಈ ದುರಂತ ಸಂಭವಿಸಿದೆ.

ಘಟಕದಲ್ಲಿ ಸ್ಫೋಟದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅದಾಗ್ಯೂ ಘಟನೆಗೆ ನಿಖರ ಕಾರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ವಿಲಾಸ್ ಕದಂ( 36) ಸಚಿನ್ ತಳವಾರ್ (22) ಹಾಗೂ ಮಂಗೇಶ್ ಜಾಮ್ಕರ್ (22) ಮೃತ ದುರ್ದೈವಿಗಳು. ಗಾಯಗೊಂಡಿರುವ ಎಂಟು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿಯನ್ನು ನಿಯಂತ್ರಣ ತರುವಲ್ಲಿ ಯಶಸ್ವಿಯಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img