Monday, May 10, 2021
Homeಕೋವಿಡ್-19ಮಾಗಡಿ ಶಾಸಕ ಎ.ಮಂಜುನಾಥ್‌ಗೆ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಮಾಗಡಿ ಶಾಸಕ ಎ.ಮಂಜುನಾಥ್‌ಗೆ ಕೊರೋನಾ ಪಾಸಿಟಿವ್

ರಾಮನಗರ, ಏಪ್ರಿಲ್ 18: ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಶಾಸಕ ಎ.ಮಂಜುನಾಥ್‌ಗೆ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಹೈದರಾಬಾದ್‌ಗೆ ವಿಮಾನದಲ್ಲಿ ತೆರಳಲು ಕೋವಿಡ್ ಪರೀಕ್ಷೆ ಪ್ರಮಾಣ ಪತ್ರಕ್ಕಾಗಿ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಆಗ ಅವರ ವರದಿ ಪಾಸಿಟಿವ್ ಆಗಿದೆ.

ಸದ್ಯ ಮನೆಯಲ್ಲಿ ವಿಶ್ರಾಂತಿ‌ ಪಡೆಯುತ್ತಿದ್ದಾರೆ. ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆಯೆಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.

ಇತ್ತೀಚಿಗೆ ಜೆಡಿಎಸ್ ಪಕ್ಷದ ನಾಯಕ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಾಗೂ ಅವರ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img