Monday, May 10, 2021
Homeರಾಜ್ಯರಾಜ್ಯದ ರೈತ ಸಮುದಾಯಕ್ಕೆ ಕೃಷಿ ಸಚಿವರಿಂದ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯದ ರೈತ ಸಮುದಾಯಕ್ಕೆ ಕೃಷಿ ಸಚಿವರಿಂದ ಸಿಹಿಸುದ್ದಿ

ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸಿಹಿಸುದ್ದಿಯೊಂದನ್ನು ನೀಡಿದ್ದು, ದಾಸ್ತಾನಿರುವ ಹಳೆಯ ರಸಗೊಬ್ಬರವನ್ನು ಹಳೆಯ ದರದಲ್ಲಿಯೇ ಮಾರಾಟ ಮಾಡಲಾಗುತ್ತದೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಬಿ.ಸಿ.ಪಾಟೀಲ್, ಕೇಂದ್ರದ ಸೂಚನೆಯ ವಿರುದ್ಧ ರಾಜ್ಯ ಕೃಷಿ ಇಲಾಖೆ‌ ಯಾವುದೇ ಆದೇಶ ಹೊರಡಿಸಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ‌ ಹೇಳಿರುವ ಹಳೆಯ ದಾಸ್ತಾನಿನ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಗೆ ತದ್ವಿರುದ್ಧವಾಗಿ ರಾಜ್ಯ ಕೃಷಿ ಇಲಾಖೆ ಆದೇಶ ಹೊರಡಿಸಿದೆ ಎಂಬುದು ಶುದ್ಧ ಸುಳ್ಳಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ‌ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಡಿ.ವಿ. ಸದಾನಂದಗೌಡ ಅವರ ಹೇಳಿಕೆ ವಿರುದ್ಧ ಯಾವುದೇ ಆದೇಶ ರಾಜ್ಯ ಕೃಷಿ ಇಲಾಖೆ‌ ಹೊರಡಿಸಿಲ್ಲ. ಹಳೆಯ ರಸಗೊಬ್ಬರ ದಾಸ್ತಾನನ್ನು ಹಳೆಯ ದರದಲ್ಲೇ ಮಾರಾಟ ಮಾಡಬೇಕೆಂದು ರಸಗೊಬ್ಬರ ಮಾರಾಟಗಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಈ ಬಗ್ಗೆ ವ್ಯಾಪಕ ಪ್ರಚಾರ ಸಹ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂಗಾರು ಹಂಗಾಮಿನ (ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ) ಕಾಂಪ್ಲೆಕ್ಸ್ (NPK fertilizer) ರಸಗೊಬ್ಬರಗಳ ಒಟ್ಟು ಬೇಡಿಕೆ 10.03 ಲಕ್ಷ ಮೆ.ಟನ್ ಇದ್ದು ಏಪ್ರಿಲ್ ತಿಂಗಳ ಬೇಡಿಕೆ 1.68 ಲಕ್ಷ ಮೆ.ಟನ್ ಇರುತ್ತದೆ. ಈಗಾಗಲೇ 5.19 ಲಕ್ಷ ಮೆ.ಟನ್ ದಾಸ್ತಾನಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img