Monday, May 10, 2021
Homeಸುದ್ದಿ ಜಾಲಕೊರೊನಾ ಹಿನ್ನೆಲೆ : ರಾಜ್ಯದ ಈ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ಇದೀಗ ಬಂದ ಸುದ್ದಿ

ಕೊರೊನಾ ಹಿನ್ನೆಲೆ : ರಾಜ್ಯದ ಈ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಹಾಗೂ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ.

ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಹಾಗೂ ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಇಂದಿನಿಂದ ಆರಂಭವಾಗಬೇಕಿದ್ದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ 2,4 ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ.

ಈ ಬಗ್ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸೋನಾರ್ ನಂದಪ್ಪ ಮಾಹಿತಿ ನೀಡಿದ್ದು, ಸಾರಿಗೆ ನೌಕರರ ಮುಷ್ಕರ ಹಾಗೂ ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಏಪ್ರಿಲ್ 19ರಿಂದ ಆರಂಭವಾಗಬೇಕಿದ್ದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ 2,4 ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದಾವಣಗೆರೆ ವಿವಿ ಪರೀಕ್ಷೆ ಮುಂದೂಡಿಕೆ

ಬೆಣ್ಣೆ ನಗರಿ ದಾವಣಗೆರೆಗೂ ಕೊರೊನಾ ಬಿಸಿ ತಟ್ಟಿದ್ದು, ಕೊರೊನಾ ಭೀತಿ ಹಿನ್ನೆಲೆ ಇಂದು ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆಯಾಗಿದೆ.

ಈ ಬಗ್ಗೆ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವೆ ಡಾ ಹೆಚ್ ಎಸ್ ಅನಿತಾ ಮಾಹಿತಿ ನೀಡಿದ್ದು, ಕೊರೊನಾ ಭೀತಿ ಹಾಗೂ ಸಾರಿಗೆ ಮುಷ್ಕರದ ಹಿನ್ನೆಲೆ ಇಂದು ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಲಾಗಿದೆ. ಅಲ್ಲದೇ ಏಪ್ರಿಲ್ 20 ರಿಂದ ಆರಂಭವಾಗಲಿರುವ ಸ್ನಾತಕೋತ್ತರ ಪರೀಕ್ಷೆಗಳನ್ನು ಕೂಡ ಮುಂದೂಡಿಕೆ ಮಾಡಲಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಿಗದಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಣಿ ಚೆನ್ನಮ್ಮ ವಿವಿ ಪರೀಕ್ಷೆ ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಮುಂದುವರೆದ ಹಿನ್ನೆಲೆ ಇಂದು ( ಏ.19) ನಡೆಯಬೇಕಿದ್ದ ರಾಣಿ ಚೆನ್ನಮ್ಮ ವಿವಿಯ ಯುಜಿ, ಪಿಜಿ ಎಂಬಿಎ ಪರೀಕ್ಷೆಗಳನ್ನು ಮುಂದೂಡಿ ವಿವಿ ಆದೇಶ ಹೊರಡಿಸಿದೆ.

ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮುಂದೂಡಲಾಗಿದ್ದು,ಪರೀಕ್ಷೆ ನಡೆಯುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ರಾಣಿ ಚೆನ್ನಮ್ಮ ವಿವಿ ಪ್ರಕಟಣೆ ಹೊರಡಿಸಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ಈ ಪರೀಕ್ಷೆಗಳು ನಡೆಯಬೇಕಿದ್ದವು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img