Monday, May 10, 2021
Homeಸುದ್ದಿ ಜಾಲ'OBC' ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

‘OBC’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2020-21 ನೇ ಸಾಲಿಗೆ ‘ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ’, ‘ ಶುಲ್ಕ ವಿನಾಯಿತಿ’, ‘ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ’ ಮತ್ತು ‘ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ’ ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸ ಲು 20/04/2021 ಕೊನೆಯ ದಿನಾಂಕವಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಹ ವಿದ್ಯಾರ್ಥಿಗಳು ದಿನಾಂಕ 20:04:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img