Tuesday, May 11, 2021
Homeಸುದ್ದಿ ಜಾಲಸಿಎಂ ಬಿ.ಎಸ್. ಯಡಿಯೂರಪ್ಪ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿದ ಸಚಿವ ನಾರಾಯಣಗೌಡ

ಇದೀಗ ಬಂದ ಸುದ್ದಿ

ಸಿಎಂ ಬಿ.ಎಸ್. ಯಡಿಯೂರಪ್ಪ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿದ ಸಚಿವ ನಾರಾಯಣಗೌಡ

ಮಂಡ್ಯ. ಏ.19 :ನಾಡಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ನಾರಾಯಣಗೌಡ. ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂವೈಕುಂಠವೆಂದೇ ಪ್ರಖ್ಯಾತವಾಗಿರುವ ಕಲ್ಲಹಳ್ಳಿಯ ಶ್ರೀಲಕ್ಷ್ಮೀ ಸಮೇತನಾದ ಭೂವರಹನಾಥಸ್ವಾಮಿ ದೇವಸ್ಥಾನಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ತಮ್ಮ ಪತ್ನಿ ದೇವಕಿ ಅವರೊಂದಿಗೆ ಭೇಟಿ ನೀಡಿ ಕೊರೋನಾ 2ನೇ ಅಲೆಯು ವ್ಯಾಪಕವಾಗಿ ಹೆಚ್ಚಾಗುತ್ತಿದೆ.

ಮಹಾಮಾರಿ ಖಾಯಿಲೆಯನ್ನು ಭಗವಂತನು ಹೊಡೆದೋಡಿಸಿ ಆರೋಗ್ಯವನ್ನು ಕರುಣಿಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ, ಸಚಿವರು ಕೊರೋನಾ ಪಾಸಿಟಿವ್ ಆಗಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ದೇವಾಲಯದ ಸುತ್ತಲೂ ಏಳು ಸುತ್ತು ಪ್ರದಕ್ಷಿಣೆ ಹಾಕಿದರು ನಾಡಿನ ಜನರು ಕೊರೋನಾ ಹಾವಳಿಯನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ 45 ವರ್ಷ ತುಂಬಿರುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಹಾರಿಸಿಕೊಂಡು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ಯಾವುದೂ ಇಲ್ಲವೆಂಬ ಸತ್ಯ ಅರಿಯಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img