Tuesday, May 11, 2021
Homeಜಿಲ್ಲೆಮೈಸೂರುತವರಿನ ರಾಮನ ನೋಡಲು ಕೊರೋನಾ ತೊಡಕು : ಶ್ರೀರಾಮ ಮಂದಿರ ಉದ್ಘಾಟನೆಗೆ ಗೈರಾದ...

ಇದೀಗ ಬಂದ ಸುದ್ದಿ

ತವರಿನ ರಾಮನ ನೋಡಲು ಕೊರೋನಾ ತೊಡಕು : ಶ್ರೀರಾಮ ಮಂದಿರ ಉದ್ಘಾಟನೆಗೆ ಗೈರಾದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮನ ಹುಂಡಿಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ. ಅವರ ಪತ್ನಿ ಪಾರ್ವತಮ್ಮ ಈ ಕಾರ್ಯಕ್ರಮದ ಉಸ್ತುವಾರಿ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯರ ಹುಟ್ಟೂರಿನಲ್ಲಿದ್ದ ಹಳೆಯ ರಾಮ ಮಂದಿರವನ್ನು ಸಿದ್ದರಾಮಯ್ಯ ಕುಟುಂಬದವರು ಮತ್ತು ಗ್ರಾಮಸ್ಥರ ಸಹಾಯದಿಂದ ಲಕ್ಷಾಂತರ ರೂ. ಖರ್ಚು ಮಾಡಿ ಜೀರ್ಣೋದ್ಧಾರ ಮಾಡಲಾಗಿದೆ. ಈ ರಾಮ ಮಂದಿರ ಇಂದು ಉದ್ಘಾಟನೆಯಾಗಲಿದ್ದು, ನಿನ್ನೆಯಿಂದಲೇ ರಾಮ ಮಂದಿರದಲ್ಲಿ ಹೋಮ-ಹವನಗಳು ಜರುಗುತ್ತಿವೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಸಿದ್ದರಾಮಯ್ಯ ಹೋಮ-ಹವನ ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇಂದು ಬೆಳಗ್ಗೆಯಿಂದಲೇ ದೇವರ ಪ್ರತಿಸ್ಠಾಪನೆ ಕಾರ್ಯಕ್ರಮ ಹಾಗೂ ಕಳಸ ಪೂಜೆ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆಗೆ ಸರಳವಾಗಿ ದೇವಾಲಯ ಉದ್ಘಾಟನೆಯಾಗಲಿದೆ‌.

ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ. ಬದಲಿಗೆ ಅವರ ಪತ್ನಿ ಪಾರ್ವತಮ್ಮ ಸಿದ್ದರಾಮಯ್ಯ ಹಾಗೂ ಸ್ಥಳೀಯ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img