Tuesday, May 18, 2021
Homeರಾಜ್ಯರಾಜ್ಯದ 'OBC' ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯದ ‘OBC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2020-21 ನೇ ಸಾಲಿಗೆ ‘ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ’, ‘ ಶುಲ್ಕ ವಿನಾಯಿತಿ’, ‘ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ’ ಮತ್ತು ‘ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ’ ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 20:04:2021 ಕ್ಕೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿತ್ತು.

ಆದರೆ ಕೆಲವೊಂದು ವಿಶ್ವವಿದ್ಯಾಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಣಿ ಸಂಖ್ಯೆಯನ್ನು ಒದಗಿಸಲು ಸಾಧ್ಯವಾಗಿರುವುದಿಲ್ಲ, ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆ ದಿನವನ್ನು ವಿಸ್ತರಿಸಲು ಮನವಿ ಮಾಡಿಕೊಂಡಿರುತ್ತಾರೆ, ಆದ್ದರಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 30:04:2021 ರವರೆಗೆ ವಿಸ್ತರಿಸಲಾಗಿದೆ ಎಂದು ಆಯುಕ್ತರು , ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದ್ದಾರೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img