Sunday, May 9, 2021
Homeಕೋವಿಡ್-19ಬೆಳಗಾವಿಯ ಅಬನಾಳ ಗ್ರಾಮದಲ್ಲಿ ಬರೋಬ್ಬರಿ 146 ಮಂದಿಗೆ ಕೊರೊನಾ ಪಾಸಿಟಿವ್!

ಇದೀಗ ಬಂದ ಸುದ್ದಿ

ಬೆಳಗಾವಿಯ ಅಬನಾಳ ಗ್ರಾಮದಲ್ಲಿ ಬರೋಬ್ಬರಿ 146 ಮಂದಿಗೆ ಕೊರೊನಾ ಪಾಸಿಟಿವ್!

ಬೆಳಗಾವಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಬನಾಳಿ ಗ್ರಾಮದ 146 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಅಬನಾಳ ಗ್ರಾಮದಲ್ಲಿ ಬರೋಬ್ಬರಿ 146 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಇಡೀ ಗ್ರಾಮವನ್ನೇ ಸೀಲ್ ಡೌನ್ ಮಾಡಿದ್ದಾರೆ. ಅಬನಾಳಿ ಗ್ರಾಮದಲ್ಲಿ ಏಪ್ರಿಲ್ 6 ರಂದು ಹೋಳಿ ಹುಣ್ಣಿಮೆ ನಿಮಿತ್ತ ಸಾತೇರಿ ದೇವಿ ಜಾತ್ರೆ ನಡೆದಿತ್ತು. ಜಾತ್ರೆಯ ಅಂಗವಾಗಿ ನಾಟಕ ಪ್ರದರ್ಶನವನ್ನೂ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಏಪ್ರಿಲ್ 9 ರ ಸುಮಾರಿಗೆ ಅಬನಾಳಿ ಗ್ರಾಮದ ಕೆಲವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಇದಾದ ನಂತರ ಆರೋಗ್ಯಾಧಿಕಾರಿಗಳು ಏಪ್ರಿಲ್ 10 ಮತ್ತು 11 ರಂದು ಅಬನಾಳ ಗ್ರಾಮದ 350 ಜನರ ಪೈಕಿ 249 ಜನರ ತಪಾಸಣೆ ನಡೆಸಿ ಮೂಗು ಹಾಗೂ ಗಂಟಲು ದ್ರವದ ಮಾದರಿಯನ್ನು ತೆಗೆದು ಕೋವಿಡ್ ಪರೀಕ್ಷೆ ನಡೆಸಿದ್ದು, ನಿನ್ನೆ ವರದಿ ಲಭ್ಯವಾಗಿದ್ದು, ಒಟ್ಟು 249 ಮಾದರಿಗಳ ಪೈಕಿ 146 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img