Sunday, May 9, 2021
Homeಕೋವಿಡ್-19ಕೊರೋನಾ ಅಬ್ಬರ : ಮಹಾರಾಷ್ಟ್ರದಲ್ಲಿ 24 ಗಂಟೆಯ 62,097 ಪ್ರಕರಣ ದಾಖಲು

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಮಹಾರಾಷ್ಟ್ರದಲ್ಲಿ 24 ಗಂಟೆಯ 62,097 ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇಂದು ಕೂಡ ಕೆಲವೊಂದು ರಾಜ್ಯಗಳಲ್ಲಿ ದಾಖಲೆಯ ಮಟ್ಟದಲ್ಲಿ ಕೋವಿಡ್ ಪ್ರಕರಣ ದಾಖಲಾಗಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 28,395 ಕೋವಿಡ್ ಪ್ರಕರಣಗಳು ​ ಕಾಣಿಸಿಕೊಂಡಿದ್ದು, 277 ಜನರು ಸಾವನ್ನಪ್ಪಿದ್ದಾರೆ. ಸದ್ಯ 85,575 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಭಾರಿ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ 62,097 ಸೋಂಕಿತ ಪ್ರಕರಣ ದಾಖಲಾಗಿದ್ದು, 519 ಜನರು ಸಾವನ್ನಪ್ಪಿದ್ದಾರೆ.

ಕೇರಳದಲ್ಲಿ 19,577 ಪ್ರಕರಣ ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಉತ್ತರಾಖಂಡ್​ದಲ್ಲಿ 3,012 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, 27 ಜನರು ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲೂ , ಕಳೆದ 24 ಗಂಟೆಯಲ್ಲಿ 21,794 ಕೋವಿಡ್​ ಪ್ರಕರಣ ದೃಢಪಟ್ಟಿದ್ದು, 149 ಜನರು ಸೋಂಕಿಗೆ ಬಲಿಯಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img