Tuesday, May 18, 2021
Homeಸುದ್ದಿ ಜಾಲಕೇಂದ್ರದಿಂದ ಆರೋಗ್ಯ ಕಾರ್ಯಕರ್ತರಿಗೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಕೇಂದ್ರದಿಂದ ಆರೋಗ್ಯ ಕಾರ್ಯಕರ್ತರಿಗೆ ಸಿಹಿಸುದ್ದಿ

ನವದೆಹಲಿ : ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಳೆದ ತಿಂಗಳು ಅವಧಿ ಮುಗಿದಿದ್ದು ಏಪ್ರಿಲ್ 24 ರವರೆಗೆ ವಿಸ್ತರಿಸಲಾಗಿದ್ದ ಕೋವಿಡ್ ವಾರಿಯರ್ಸ್ ಗಳ 50 ಲಕ್ಷ ರೂ . ವಿಮಾ ಯೋಜನೆಯನ್ನು ಒಂದು ವರ್ಷಕ್ಕೆ ಕೇಂದ್ರ ಸರ್ಕಾರ ವಿಸ್ತರಿಸಿದೆ .

ಕಳೆದ ವರ್ಷ ಕೋವಿಡ್ 19 ಪರಿಹಾರ ಪ್ಯಾಕೇಜ್‌ನ ಭಾಗವಾಗಿ ಘೋಷಿಸಿದ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್‌ ಮಾರ್ಚ್ 24ರಂದು ಮುಕ್ತಾಯಗೊಂಡಿತ್ತು. ಇದೀಗ ಈ ಪ್ಯಾಕೇಜ್ ಅನ್ನು ಮುಂದುವರೆಸಿದ್ದು ಸುಮಾರು 22 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಸುರಕ್ಷತಾ ಬಲ ನೀಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನ್ಯೂ ಇಂಡಿಯಾ ಅಶ್ಯೂರೆನ್ಸ್‌ನೊಂದಿಗಿನ ಒಪ್ಪಂದದ ನಂತರ ಇತ್ತೀಚಿನ ವಿಸ್ತರಣೆಯು ಮುಂದಿನ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಇಲ್ಲಿಯವರೆಗೂ 287 ಕ್ಲೈಮ್‌ಗಳನ್ನು ಈ ಯೋಜನೆಯಡಿ ಇತ್ಯರ್ಥಪಡಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img