Tuesday, May 18, 2021
Homeಸುದ್ದಿ ಜಾಲರಾಜ್ಯ ಸರ್ಕಾರದಿಂದ `ಖಾಸಗಿ ಶಾಲಾ ಶಿಕ್ಷಕರಿಗೆ' ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ `ಖಾಸಗಿ ಶಾಲಾ ಶಿಕ್ಷಕರಿಗೆ’ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಖಾಸಗಿ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಶಿಕ್ಷಣ ನಿಧಿ ಸೌಲಭ್ಯ ನೀಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕರನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಎಲ್ಲ ಶಿಕ್ಷಕರಂತೆ ಕಷ್ಟಕಾಲದ ತತ್ ಕ್ಷಣದ ನೆರವಿಗೆ ಶಿಕ್ಷಣ ನಿಧಿಯ ಸದಸ್ಯತ್ವ ನೀಡಿ ಆ ಮೂಲಕ ನಿಧಿಯಿಂದ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಕರಿಗೆ ದೊರೆಯುವ ಸೌಲಭ್ಯ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರಂತೆಯೇ ಖಾಸಗಿ ಶಾಲಾ ಶಿಕ್ಷಕರಿಗೂ ಅಪಘಾತ ಮತ್ತು ಮರಣ ಪರಿಹಾರ, ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ, ಶಿಕ್ಷಕರು ಮತ್ತು ಅವರ ಅವಲಂಬಿತರಿಗೆ ವೈದ್ಯಕೀಯ ಧನಸಹಾಯ ಸೇರಿ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img