Tuesday, May 18, 2021
Homeರಾಜ್ಯಕೋವಿಡ್ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಇದೀಗ ಬಂದ ಸುದ್ದಿ

ಕೋವಿಡ್ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಸುಬ್ರಹ್ಮಣ್ಯ: ರಾಜ್ಯಾದ್ಯಂತ ಕೋವಿಡ್‌ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಇಂದಿನಿಂದ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.

ದೇವರ ದರ್ಶನ, ಸೇವೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ವಿಶೇಷ ಉತ್ಸಾವಾದಿಗಳನ್ನು ತಡೆಹಿಡಿಯಲಾಗಿದೆ. ದೇವಸ್ಥಾನದ ವಸತಿಗೃಹ, ಅತಿಥಿ ಗೃಹಗಳನ್ನು ಭಕ್ತರಿಗೆ ಅಥವಾ ಸಾರ್ವಜನಿಕರಿಗೆ ಹಂಚಿಕೆ ಮಾಡದಿರಲು ಸೂಚಿಸಲಾಗಿದೆ. ಈಗಾಗಲೇ ಸೇವೆಗಳನ್ನು ಬುಕ್ ಮಾಡಿದವರಿಗೆ ಸೇವೆ ಆರಂಭವಾದ ಬಳಿಕ ಆಧ್ಯತೆ ಮೇರೆಗೆ ಸೇವಾ ಅವಕಾಶ ನೀಡಲಾಗುವುದು ಎಂದು ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img