Tuesday, May 18, 2021
Homeಜಿಲ್ಲೆಉಡುಪಿಉಡುಪಿ ಶೀರೂರು ಮಠಕ್ಕೆ ಉತ್ತರಾಧಿಕಾರಿ ಆಯ್ಕೆ

ಇದೀಗ ಬಂದ ಸುದ್ದಿ

ಉಡುಪಿ ಶೀರೂರು ಮಠಕ್ಕೆ ಉತ್ತರಾಧಿಕಾರಿ ಆಯ್ಕೆ

ಉಡುಪಿ: ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಅನಿರುದ್ಧ ಎಂಬ ವಟುವನ್ನು ಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದು, ಮೇ 14ರಂದು ಪಟ್ಟಾಭಿಷೇಕ ನಡೆಯಲಿದೆ.

ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಉತ್ತರಾಧಿಕಾರಿಯಾಗಿ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಡಾ|| ಎಂ.ಉದಯ್ ಕುಮಾರ್ ಸರಳತ್ತಾಯ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರ ಅನಿರುದ್ಧ ಎಂಬ ವಟುವನ್ನು ಆಯ್ಕೆ ಮಾಡಲಾಗಿದೆ.

ವಟು ಅನಿರುದ್ಧ 10ನೇ ತರಗತಿಯಲ್ಲಿ ವ್ಯಾಸಂಗ ಪೂರೈಸಿದ್ದು, ಬಾಲ್ಯದಿಂದಲೇ ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ಹೊಂದಿದ್ದರು. ತಾನೇ ಸ್ವತಃ ಶೀರೂರು ಮಠಕ್ಕೆ ಯತಿಯಾಗಿ ತೆರಳುವೆನೆಂದು ತನ್ನ ಅಭಿಪ್ರಾಯವನ್ನು ತಂದೆಯ ಬಳಿ ವ್ಯಕ್ತಪಡಿಸಿದ್ದರು. ಈ ವೇಳೆ ಜಾತಕ ವಿಮರ್ಶಿಸಿದಾಗ ಪೀಠಾಧಿಪತ್ಯದ ಯೋಗ ಇದೆ ಎಂದು ತಿಳಿಯಿತು ಎಂದು ಸೋದೆ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img