Tuesday, May 18, 2021
Homeಕೋವಿಡ್-19ಬೆಳಗಾವಿ ಲೋಕಸಭಾ ಉಪಚುನಾವಣಾ ಭದ್ರತೆಗೆ ತೆರಳಿದ್ದ 10 ಮಂದಿ ಪೊಲೀಸರಿಗೆ ಕೊರೊನಾ

ಇದೀಗ ಬಂದ ಸುದ್ದಿ

ಬೆಳಗಾವಿ ಲೋಕಸಭಾ ಉಪಚುನಾವಣಾ ಭದ್ರತೆಗೆ ತೆರಳಿದ್ದ 10 ಮಂದಿ ಪೊಲೀಸರಿಗೆ ಕೊರೊನಾ

ಬಾಗಲಕೋಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆಯ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆ ಜಿಲ್ಲೆಯ 200 ಪೊಲೀಸರ ಪೈಕಿ ಇದೀಗ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆಎನ್ನಲಾಗಿದೆ. ಸದ್ಯ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರ ಸಂಪರ್ಕದಲ್ಲಿದ್ದ ಇತರರ ಕೋವಿಡ್ ಟೆಸ್ಟ್ ಮಾಡಲಾಗಿದೆ. 10 ಪೊಲೀಸರಿಗೆ ಕೊರೊನಾ ವೈರಸ್ ಸೊಂಕು ದೃಢಪಟ್ಟಿ ಹಿನ್ನೆಲೆಯಲ್ಲಿ ಇತರೆ ಪೊಲೀಸರಿಗೂ ಆತಂಕ ಶುರುವಾಗಿದೆ.

ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 23558 ಹೊಸ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ತುತ್ತಾದವರ ಸಂಖ್ಯೆ 1222202 ಕ್ಕೆ ಏರಿಕೆಯಾಗಿದೆ. 116 ಜನರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 13762 ಕ್ಕೆ ಏರಿಕೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img