Monday, May 10, 2021
Homeಸುದ್ದಿ ಜಾಲಪ. ಬಂಗಾಳದಲ್ಲಿ 6ನೇ ಹಂತದ ಮತದಾನ ಆರಂಭ

ಇದೀಗ ಬಂದ ಸುದ್ದಿ

ಪ. ಬಂಗಾಳದಲ್ಲಿ 6ನೇ ಹಂತದ ಮತದಾನ ಆರಂಭ

ಕೋಲ್ಕತ್ತಾ: ಕೋವಿಡ್‌ 2ನೇ ಅಲೆ ಜೋರಾಗಿರುವ ನಡುವೆ ಇಂದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 6ನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ರಾತ್ರಿ 7ರವರೆಗೆ 43 ಕ್ಷೇತ್ರಗಳಿಗೆ ವೋಟಿಂಗ್‌ ನಡೆಯಲಿದೆ.

ಇಂದು ಮತದಾನ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳಲ್ಲೂ ಆಡಳಿತಾರೂಢ ಪಕ್ಷ ಟಿಎಂಸಿ ಮತ್ತು ಬಿಜೆಪಿಯ ನಡುವೆ ನೇರ ಪೈಪೋಟಿ ಇದೆ. 2016 ಮತ್ತು 2019ರಲ್ಲಿಯೂ ಉಭಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಬಂಗಾಳ ವಿಧಾನಸಭಾ ಚುನಾವಣೆಯ 6 ನೇ ಹಂತದಲ್ಲಿ 43 ಸ್ಥಾನಗಳಿಗೆ ಮತದಾನ ಪ್ರಾರಂಭವಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಸುಮಾರು ಒಂದು ಕೋಟಿ ಮತದಾರರು ಇಂದು ಮತ ಚಲಾಯಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಜನರು ಮತ ಚಲಾಯಿಸುವಂತೆ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ: ಪಶ್ಚಿಮ ಬಂಗಾಳದ ಜನರು ಹೊಸ ವಿಧಾನಸಭೆಯನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಿದ್ದಾರೆ. ಇಂದು ಆರನೇ ಹಂತದಲ್ಲಿ, ಮತದಾನ ಮಾಡುತ್ತಿರುವವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಒತ್ತಾಯಿಸುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img