Monday, May 10, 2021
Homeಸುದ್ದಿ ಜಾಲಶಾಸಕ ಜಮೀರ್ ಅಹ್ಮದ್ ಗೆ ಮತ್ತೆ ಕೊರೊನಾ ಸೋಂಕು

ಇದೀಗ ಬಂದ ಸುದ್ದಿ

ಶಾಸಕ ಜಮೀರ್ ಅಹ್ಮದ್ ಗೆ ಮತ್ತೆ ಕೊರೊನಾ ಸೋಂಕು

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಮತ್ತೆ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಸ್ವತ: ಶಾಸಕರು ಮಾಹಿತಿ ನೀಡಿದ್ದು, ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಿಸಿದ್ದೆ. ಈಗ ವರದಿಯಲ್ಲಿ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್ ನಲ್ಲಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಶಾಸಕ ಜಮೀರ್ ಅಹ್ಮದ್ ಕಳೆದ ಆಗಸ್ಟ್ ನಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೀಗ ಮತ್ತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img