Tuesday, May 18, 2021
Homeಸುದ್ದಿ ಜಾಲನೈಟ್ ಕರ್ಪ್ಯೂ ನಿಯಮ ಉಲ್ಲಂಘಿಸಿದರೆ ವಾಹನಗಳು ಜಪ್ತಿ :ಸಚಿವ ಬೊಮ್ಮಾಯಿ ಎಚ್ಚರಿಕೆ

ಇದೀಗ ಬಂದ ಸುದ್ದಿ

ನೈಟ್ ಕರ್ಪ್ಯೂ ನಿಯಮ ಉಲ್ಲಂಘಿಸಿದರೆ ವಾಹನಗಳು ಜಪ್ತಿ :ಸಚಿವ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಕರ್ಪ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಪ್ಯೂ ಜಾರಿಗೆ ತರಲಾಗಿಇದ್ದು, ನೈಟ್ ಕರ್ಪ್ಯೂ ನಿಯಮ ಉಲ್ಲಂಘನೆ ಮಾಡಿ ವಾಹನ ಚಲಾಯಿಸಿದರೆ ಅಂತಹ ವಾಹನಗಳನ್ನು ಸೀಜ್ ಮಾಡಲಾಗುವುದು ಮತ್ತು ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕಲ್ಯಾಣ ಮಂಟಪ, ಸಭಾ ಭವನಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಪೊಲೀಸರು ಏಕಾಏಕಿ ಲಾಠಿ ಕೈಗೆತ್ತಿಕೊಳ್ಳುವುದಿಲ್ಲ. ಆದರೆ ಕರ್ಪ್ಯೂ ವೇಳೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img