Tuesday, May 11, 2021
Homeಸುದ್ದಿ ಜಾಲಕೊರೊನಾ ಹೆಚ್ಚಳ : ಇಂದು ಪ್ರಧಾನಿ ನರೇಂದ್ರ ಮೋದಿ ಸರಣಿ ಸಭೆ

ಇದೀಗ ಬಂದ ಸುದ್ದಿ

ಕೊರೊನಾ ಹೆಚ್ಚಳ : ಇಂದು ಪ್ರಧಾನಿ ನರೇಂದ್ರ ಮೋದಿ ಸರಣಿ ಸಭೆ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಕೇಂದ್ರದ ನಾಯಕರ ಜೊತೆಗೆ ಆಂತರಿಕ ವಿಮರ್ಶಾ ಸಭೆ ನಡೆಸಲಿದ್ದಾರೆ.

ಬಳಿಕ 10 ಗಂಟೆಗೆ ಕೊರೊನಾ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img