Monday, May 10, 2021
Homeಸುದ್ದಿ ಜಾಲಕೊರೊನಾ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ ಎಂದ ಪಾಕ್ ಪ್ರಧಾನಿ

ಇದೀಗ ಬಂದ ಸುದ್ದಿ

ಕೊರೊನಾ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ ಎಂದ ಪಾಕ್ ಪ್ರಧಾನಿ

ಇಸ್ಲಾಮಾಬಾದ್: ಮಹಾಮಾರಿ ಕರೊನಾ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಕರೆ ನೀಡಿದ್ದಾರೆ. ಭಾರತದಲ್ಲಿ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಕರೊನಾ ಸೋಂಕಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಅವರು ಟ್ವೀಟ್ ಮಾಡಿದ್ದಾರೆ.

ಅಪಾಯಕಾರಿ ಕರೊನಾ ವಿರುದ್ಧದ ಹೋರಾಟದಲ್ಲಿ ನಾನು ಭಾರತದ ಜೊತೆಗಿರುತ್ತೇನೆ. ಈ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸುವ ಅವಶ್ಯಕತೆ ಇದೆ. ಕರೊನಾಕ್ಕೆ ತುತ್ತಾಗಿರುವವರು ಬೇಗನೆ ಚೇತರಿಸಿಕೊಳ್ಳಲಿ. ಮಹಾಮಾರಿ ಕರೊನಾ ಮಾನವೀಯತೆಗೆ ಸವಾಲೊಡ್ಡಿದೆ. ಇದನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸೋಣ. ನಾವು ಭಾರತದೊಂದಿಗೆ ಜೊತೆಯಾಗಿದ್ದೇವೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಇದಲ್ಲದೇ ಪಾಕಿಸ್ತಾನ್ ವಿದೇಶಾಂಗ ಸಚಿವ ಷಾ ಮಹಮ್ಮದ್ ಖುರೇಶಿ ಕೂಡ ಟ್ವೀಟ್ ಮಾಡಿ ಕರೊನಾಕ್ಕೆ ತುತ್ತಾಗಿರುವ ಭಾರತದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಕರೊನಾದಿಂದ ಪ್ರಾಣ ಕಳೆದುಕೊಂಡ ಭಾರತೀಯರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕರೊನಾ ವಿರುದ್ಧದ ಹೋರಾಟದಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಭಾರತದಲ್ಲಿ ಸತತ ಹತ್ತನೆ ದಿನವೂ ಕರೊನಾ ಮೂರು ಲಕ್ಷದ ಗಡಿ ದಾಟಿದೆ. ಶುಕ್ರವಾರ 3,46,786 ಸೋಂಕಿನ ಪ್ರಕರಣಗಳು ಕಂಡು ಬಂದಿವೆ. ಒಟ್ಟು 25 ಲಕ್ಷ ಸಕ್ರಿಯ ಪ್ರಕರಣಗಳು ವರದಿಯಾಗಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img