Monday, May 10, 2021
Homeಸುದ್ದಿ ಜಾಲಕೇಂದ್ರ ಸಚಿವ ಸೋಮ್ ಪ್ರಕಾಶ್ ಗೆ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಕೇಂದ್ರ ಸಚಿವ ಸೋಮ್ ಪ್ರಕಾಶ್ ಗೆ ಕೊರೋನಾ ಪಾಸಿಟಿವ್

ಚಂಡೀಗಢ: ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಮೊಹಾಲಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆಮ್ಲಜನಕದ ಬೆಂಬಲದಲ್ಲಿದ್ದು, ವೈದ್ಯರು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಹಾಗೂ ಹೋಶಿಯಾರ್‌ಪುರ ಬಿಜೆಪಿ ಸಂಸದ ಪ್ರಕಾಶ್(72) ಈ ವಾರದ ಆರಂಭದಲ್ಲಿ ತಮಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದರು.

ಸೋಮ್ ಪ್ರಕಾಶ್ ಶ್ವಾಸಕೋಶದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಅವರು ಆಮ್ಲಜನಕದ ಬೆಂಬಲದಲ್ಲಿದ್ದಾರೆ. ಕೇಂದ್ರ ಸಚಿವರು ತೀವ್ರ ನಿಗಾ ಘಟಕದಲ್ಲಿದ್ದು, ಅವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. .

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img